ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ಲೈನ್ ಡೆಸ್ಕ್:
ತೆಲಂಗಾಣದ ರೈತರ ಜಮೀನು ಬಲವಂತವಾಗಿ ಕಸಿದುಕೊಂಡ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರ ಖಾತೆಯನ್ನು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹಿಂಡೆದುಕೊಂಡಿದ್ದಾರೆ.
ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ಸಚಿವ ಎಟೆಲಾ ರಾಜೇಂದರ್ ಬಲವಂತವಾಗಿ ಕಬಳಿಸಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರ ಬಳಿ ಇದ್ದ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗಳನ್ನು ಹಿಂಪಡೆಯಲಾಗಿದೆ.
ಈ ಖಾತೆಗಳನ್ನು ಕೆ. ಚಂದ್ರಶೇಖರ ರಾವ್ ಅವರೇ ನಿರ್ವಹಿಸಲಿದ್ದು, ಖಾತೆಗಳ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಅನುಮತಿ ಪಡೆಯಲಾಗಿದೆ. ಸಚಿವರ ವಿರುದ್ಧ ಡಿಸಿ ನೇತೃತ್ವದಲ್ಲಿ ತನಿಖೆ ನಡೆಸಲು ಮುಖ್ಯ ಕಾರ್ಯದರ್ಶಿ ರಮೇಶ್ ಕುಮಾರ್ ಅವರಿಗೆ ಸಿಎಂ ಆದೇಶ ನೀಡಿದ್ದಾರೆ.