ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಶುಕ್ರವಾರ ನೆಲಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ಪ್ರದೇಶದ ಎಲ್ಒಸಿ ಬಳಿಯ ಗೂಗಲ್ದಾರಾದಲ್ಲಿ ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಾಯಗೊಂಡ ಇಬ್ಬರು ಸಿಬ್ಬಂದಿಯನ್ನು ಡ್ರಗ್ಮುಲ್ಲಾದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.