ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಗುಂಬೆ ಘಾಟ್ ರಸ್ತೆಯ ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಸಂಜೆ ವೇಳೆ ಸಂಭವಿಸಿದ ಈ ಘಟನೆ ಪ್ರಯಾಣಿಕರಿಗೆ ಭಾರೀ ತೊಂದರೆ ಉಂಟುಮಾಡಿದೆ. ಮರ ಬಿದ್ದ ಪರಿಣಾಮ ರಸ್ತೆ ಸಂಪೂರ್ಣವಾಗಿ ಮುಚ್ಚಿಕೊಂಡಿದೆ.
ಗೂಡ್ಸ್ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ಧರೆ ಕುಸಿದ ಭಾಗದಲ್ಲಿ ಕಲ್ಲುಮಣ್ಣು ಮತ್ತು ದೊಡ್ಡ ಮರ ರಸ್ತೆ ಮಧ್ಯದಲ್ಲಿ ಬಿದ್ದಿರುವುದರಿಂದ ತೆರವು ಕಾರ್ಯ ಗೊಂದಲಮಯವಾಗಿದೆ. ಆಗುಂಬೆ ಘಾಟ್ ರಸ್ತೆ ಮಲೆನಾಡು ಹಾಗೂ ಕರಾವಳಿ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಈಗ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.