Wednesday, December 7, 2022

Latest Posts

ಜಮ್ಮು ಕಾಶ್ಮೀರದ ಕಿಶ್ತ್ವಾ ಜಲವಿದ್ಯುತ್ ಸ್ಥಾವರದಲ್ಲಿ ಭೂಕುಸಿತ: 4 ಮಂದಿ ಸಾವು 6 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ರಾಟಲ್ ಜಲವಿದ್ಯುತ್ ಯೋಜನೆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

“ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಒಟ್ಟು ನಾಲ್ಕು ಮೃತದೇಹಗಳು ಮತ್ತು ಆರು ಗಾಯಾಳುಗಳನ್ನು ರಕ್ಷಿಸಲಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನ ಡೆಪ್ಯುಟಿ ಕಮಿಷನರ್ ದೇವಾಂಶ್ ಯಾದವ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಹಿಂದೆ ಘಟನೆಯ ನಂತರ ಸ್ಥಳಕ್ಕೆ ನಿಯೋಜಿಸಲಾದ ಸುಮಾರು 6 ಜನರ ರಕ್ಷಣಾ ತಂಡವೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಶರ್ಮಾ ತಿಳಿಸಿದ್ದರು.

ರಾಟಲ್ ಜಲವಿದ್ಯುತ್ ಯೋಜನೆಯು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಕಿಸ್ತ್ವಾರ್ ಜಿಲ್ಲೆಯ ಚೆನಾಬ್ ನದಿಯ ಮೇಲೆ ಪ್ರಸ್ತಾಪಿಸಲಾದ ಜಲ ವಿದ್ಯತ್‌ ಯೋಜನೆಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!