Tuesday, August 16, 2022

Latest Posts

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ: ಹಾಸನ – ಮಂಗಳೂರು ರಸ್ತೆ ಸಂಚಾರ ಬಂದ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಸಕಲೇಶಪುರ:

ಹಾಸನ-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ. ಪರಿಣಾಮ ಈ ಮಾರ್ಗ ತಾತ್ಕಾಲಿಕ ಬಂದ್ ಮಾಡಿದ್ದು, ಪ್ರಯಾಣಿಕರು ಬದಲಿ ಮಾರ್ಗದಲ್ಲಿ ತೆರಳುವಂತೆ ಹಾಸನ ಜಿಲ್ಲಾ ಪೊಲೀಸ್ ಕೋರಿದೆ.

ದೋಣಿಗಲ್ ಸಮೀಪ ಟಾರು ರಸ್ತೆಯೇ ಕುಸಿದಿದ್ದರಿಂದ, ಹೆಚ್ಚಿನ ಅಪಾಯ ತಡೆಯಲು ತುರ್ತಾಗಿ ದುರಸ್ತಿ ಪಡಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಕಲೇಶಪುರ ತಹಶೀಲ್ದಾರ್ ಜಯಕುಮಾರ್ ಸೇರಿದಂತೆ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತ್ವರಿತವಾಗಿ ಪರಿಹಾರ ಕಾರ್ಯಗಳಿಗೆ ಕ್ರಮವಹಿಸಿದ್ದಾರೆ. ರಸ್ತೆ ದುರಸ್ತಿಗಾಗಿ ಶಿರಾಡಿ ಘಾಟಿ ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಮಂಗಳೂರು ಹೋಗುವ ಎಲ್ಲ ವಾಹನಗಳು ಬೇಲೂರು, ಮೂಡಿಗೆರೆ ಮಾರ್ಗವಾಗಿ ಚಾರ್ಮಾಡಿ ಹಾಗೂ ಮಂಗಳೂರಿಂದ ಹಾಸನ, ಬೆಂಗಳೂರು ಕಡೆ ಪ್ರಯಾಣಿಸುವವರು ಬದಲಿ ಮಾರ್ಗ ಚಾರ್ಮಾಡಿ ಘಾಟಿ ರಸ್ತೆ ಬಳಸುವಂತೆ ಪೊಲೀಸರು ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss