Wednesday, August 10, 2022

Latest Posts

ಶಿರಾಡಿ ಘಾಟ್ ನಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರಕ್ಕೆ ಬಿತ್ತು ಬ್ರೇಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿರಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಭಾರಿ ವಾಹನ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಭಾರಿ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಏಕಮುಖವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಲಹೆಯಂತೆ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss