ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹ ಪತ್ತೆ

ಹೊಸದಿಗಂತ ವರದಿ, ಭಟ್ಕಳ:
ಸತತವಾಗಿ ಸುರಿದ ಭಾರೀ ಮಳೆಯ ಪರಿಣಾಮ ತಾಲೂಕಿನ ಮುಟ್ಟಳ್ಳಿಯಲ್ಲಿ ಮನೆಯೊಂದರ ಮೇಲೆ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ನಾಲ್ವರಲ್ಲಿ ಮೂವರ ಮೃತ ದೇಹಗಳು ಪತ್ತೆಯಾಗಿದೆ. ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಲಕ್ಷ್ಮೀನಾರಾಯಣ ನಾಯ್ಕ (48), ಅನಂತ ನಾರಾಯಣ ನಾಯ್ಕ (32), ಲಕ್ಷ್ಮೀ ನಾಯ್ಕ (33) ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು.
ಗುಡ್ಡ ಕುಸಿದ ತಕ್ಷಣ ಸ್ಥಳೀಯರು ತೆರವು ಕಾರ್ಯಾಚರಣೆ ನಡೆಸಿದ್ದು, ನಂತರ ಜೆ.ಸಿ.ಬಿ ಬಳಸಿ ಕಾರ್ಯಾಚರಣೆ ನಡೆಸಲಾಯಿತಾದರೂ  ಮಣ್ಣಿನ ಡಿಯಲ್ಲಿ ಸಿಲುಕಿಕೊಂಡವರ ಪ್ರಾಣ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!