Monday, October 13, 2025

ಚಮೋಲಿಯಲ್ಲಿ ಭೂಕುಸಿತ: ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ತಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆ ಮತ್ತು ಮೇಘಸ್ಫೋಟದಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ತೀವ್ರ ಭೂಕುಸಿತ ಸಂಭವಿಸಿದೆ. ಈ ಘಟನೆಯಲ್ಲಿ 38 ವರ್ಷದ ತಾಯಿ ಮತ್ತು ಆಕೆಯ 10 ವರ್ಷದ ಮಕ್ಕಳಾದ ವಿಶಾಲ್ ಮತ್ತು ವಿಕಾಸ್ ಮೃತಪಟ್ಟಿದ್ದಾರೆ. ಮಹಿಳೆಯ ಪತಿ ಕುನ್ವರ್ ಸಿಂಗ್ ಅವರನ್ನು ಅವಶೇಷಗಳ ಅಡಿಯಲ್ಲಿ ಪವಾಡಸದೃಶವಾಗಿ ರಕ್ಷಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತದ ಸಮಯದಲ್ಲಿ ತಾಯಿ ತನ್ನ ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದ್ದು, ಮಕ್ಕಳನ್ನು ಅಪ್ಪಿಕೊಂಡೆ ಪರಣಬಿಟ್ಟಿದ್ದಾರೆ. ಈ ಘಟನೆ ನಂತರ ಎಂಟು ಮಂದಿ ಇನ್ನೂ ನಾಪತ್ತೆಯಾಗಿದ್ದು, ಜಿಲ್ಲಾಡಳಿತ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತೀವ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಪ್ರವಾಹ ಮತ್ತು ಭೂಕುಸಿತಗಳು ಸ್ಥಳೀಯ ಮೂಲಸೌಕರ್ಯಗಳಿಗೆ ಬಹುಮಾನ ಹಾನಿ ಉಂಟುಮಾಡಿದ್ದು, ಪ್ರದೇಶದಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ.

ವಿಪತ್ತು ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ತೀವ್ರಗೊಳಿಸಲ್ಪಟ್ಟಿದ್ದು, ನಾಪತ್ತೆಯಾದವರನ್ನು ಪತ್ತೆಹಚ್ಚುವಲ್ಲಿ ಅಧಿಕಾರಿಗಳು ತೀವ್ರ ಪರಿಶ್ರಮ ವಹಿಸುತ್ತಿದ್ದಾರೆ. ಪ್ರವಾಸಿಗರು ಮತ್ತು ಸ್ಥಳೀಯರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದು, ತುರ್ತು ಪರಿಸ್ಥಿತಿ ನಿರ್ವಹಣಾ ಕ್ರಮಗಳು ಜಾರಿಗೆ ಬಂದಿವೆ.

error: Content is protected !!