ಚೀನಾದಲ್ಲಿ ಭೂಕುಸಿತ: ಐವರು ಕಾರ್ಮಿಕರು ಸಾವು, ಒಂಬತ್ತು ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈರುತ್ಯ ಚೀನಾ ಭಾಗದಲ್ಲಿ ಭೂಕುಸಿತ ಉಂಟಾಗಿದ್ದು, ಐದು ಮಂದಿ ಮೃತಪಟ್ಟಿದ್ದಾರೆ. ಚೀನಾದ ಗುಝೌ ಪ್ರಾಂತ್ಯದ ಬಿಜೀ ಎಂಬ ನಗರದಲ್ಲಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಂದಿ ನಾಪತ್ತೆಯಾಗಿದ್ದು, ಶೋಧಕಾರ್ಯ ನಡೆಯುತ್ತಿದೆ.

ಕಾಮಗಾರಿ ಸ್ಥಳದಲ್ಲಿ ಭೂಕುಸಿತ ಉಂಟಾಗಿದೆ. ಕೆಲಸ ಮಾಡುತ್ತಿದ್ದ ಏಳು ಮಂದಿಯನ್ನು ರಕ್ಷಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!