ಎಕ್ವಡಾರ್‌ನ ಆಂಡಿಯನ್ ಪ್ರದೇಶದಲ್ಲಿ ಭೂಕುಸಿತ : 7 ಮಂದಿ ಸಾವು, 23 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಎಕ್ವಡಾರ್‌ನ ಆಂಡಿಯನ್ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಏಳು ಜನರು ಸಾವು, 23 ಮಂದಿಗೆ ಗಾಯ ಮತ್ತು ಸುಮಾರು 50 ಮಂದಿ ಕಾಣೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಹೇಳಿದೆ.

ಎಕ್ವಡಾರ್‌ನ ಚಿಂಬೊರಾಜೊ ಪ್ರಾಂತ್ಯದ ಅಲೌಸಿ ನಗರದಲ್ಲಿ ಭೂಕುಸಿತದಿಂದಾಗಿ 16 ಜನರು ಸಾವನ್ನಪ್ಪಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ಅಲೌಸಿ ನಗರದ ಕೆಲವು ಭಾಗಗಳಲ್ಲಿ ದೊಡ್ಡ ಪ್ರಮಾಣದ ಭೂಮಿಯು ಮುಳುಗಿದ ಪರಿಣಾಮ 32 ಜನರನ್ನು ರಕ್ಷಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಭಾರೀ ಮಳೆಯಿಂದಾಗಿ ಎಕ್ವೆಡಾರ್‌ನಾದ್ಯಂತ ರಸ್ತೆಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ನಾಶವಾಗಿವೆ. ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಈ ತಿಂಗಳ ಆರಂಭದಲ್ಲಿ ತೀವ್ರ ಹವಾಮಾನ ಮತ್ತು ಪ್ರಬಲ ಭೂಕಂಪದಿಂದ ಹೆಚ್ಚು ಹಾನಿಗೊಳಗಾದ 14 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!