ಜೋಶಿಮಠದಲ್ಲಿ ಭೂಕುಸಿತ: ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಗಳ ರಕ್ಷಣೆ ಮೊದಲ ಆದ್ಯತೆ ಎಂದ ಉತ್ತರಾಖಂಡ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಜೋಶಿಮಠದಲ್ಲಿ ನಿರಂತರ ಭೂಕುಸಿತ ಉಂಟಾಗಿದ್ದು, ಇದರಿಂದ 600 ಕುಟುಂಬಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ.

ಇನ್ನು ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಜೋಶಿಮಠಕ್ಕೆ ಬಂದು ಪರಿಸ್ಥಿತಿ ಅವಲೋಕಿಸಿದ ಅವರು,ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಅಗತ್ಯಬಿದ್ದರೆ ಏರ್ ಲಿಫ್ಟ್ ಮಾಡಲು ಆದೇಶಿಸಿದರು.

ಮುಖ್ಯಮಂತ್ರಿ ಧಾಮಿ ಇಂದು ನರಸಿಂಗ್ ದೇವಸ್ಥಾನ ಮತ್ತು ಮಾರ್ವಾಡಿ ಪ್ರದೇಶಕ್ಕೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳನ್ನು ಸಿಎಂ ಧಾಮಿ ಭೇಟಿ ಮಾಡಿದ್ದು ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.

ಅಧಿಕಾರಿಗಳ ಪ್ರಕಾರ, ಇದುವರೆಗೆ 100ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಜೋಶಿಮಠದಲ್ಲಿ ಮೊಕ್ಕಾಂ ಹೂಡಿರುವ ಗಡ್ವಾಲ್ ರೇಂಜ್ನ ಕಮಿಷನರ್ ಮತ್ತು ಇತರ ಅಧಿಕಾರಿಗಳನ್ನು ಮುಖ್ಯಮಂತ್ರಿ ಧಾಮಿ ಭೇಟಿಯಾಗಿ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿದರು.

ಜೋಶಿಮಠದಲ್ಲಿ ಭೂಕುಸಿತ ಉಂಟಾಗಿದ್ದು, 600ಕ್ಕೂ ಹೆಚ್ಚು ಕುಟುಂಬಗಳ ಜೀವ ಅಪಾಯದಲ್ಲಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಪುನರ್ವಸತಿ ಕಲ್ಪಿಸುವ ಕಾರ್ಯವನ್ನು ತೀವ್ರಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!