ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಾಲ್ವಾಡಿ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಭೂಕುಸಿತದಿಂದಾಗಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಇಂದು ಬೆಳಿಗ್ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ. ಈವರೆಗೆ ಯಾವುದೇ ಶವವನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇನ್ನೂ ಆರು ಶವಗಳನ್ನು ಹೊರತೆಗೆದ ನಂತರ ಸಾವಿನ ಸಂಖ್ಯೆ 27ಕ್ಕೆ ತಲುಪಿದೆ. ಇನ್ನೂ 80 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತ ಪೀಡಿತ ಪ್ರದೇಶದಲ್ಲಿ ಮೃತ ದೇಹಗಳಿಂದ ದುರ್ವಾಸನೆ ಬರುತ್ತಿದ್ದು, ಇರ್ಶಾಲ್ವಾಡಿ ಮತ್ತು ನಾನಿವಾಲಿ ಗ್ರಾಮದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ.