ಮಂಗಳೂರು ಏರ್‌ಪೋಟ್೯ ರನ್ ವೇ ಪರಿಸರದಲ್ಲಿ ಭೂಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರೀ ಮಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರನ್ ವೇ ಪರಿಸರದಲ್ಲಿ ಭೂ ಕುಸಿತ ಕಾಣಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಈ ಭೂಕುಸಿತ ಹೊಸ ಆತಂಕ ಸೃಷ್ಟಿಸಿದೆ.

ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಮಳೆಯಿಂದಾಗಿ ಮಂಗಳೂರು ನಗರದಲ್ಲಿಯೂ ಅಪಾರ ಸಂಕಷ್ಟ ಎದುರಾಗಿದ್ದು, ರಸ್ತೆಗಳಲ್ಲಿ ಅಲ್ಲಲ್ಲಿ ಮಳೆ ನೀರು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡಿದೆ. ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಫುಲ್ ಅಲಟ್೯ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!