Monday, August 8, 2022

Latest Posts

ಮಣಿಪುರದಲ್ಲಿ ಭೂಕುಸಿತ: 7 ಸಾವು, ಅಧಿಕ ಜನರ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರ ನೋನಿ ಜಿಲ್ಲೆಯ ತುಪುಲ್ ರೈಲ್ವೆ ನಿಲ್ದಾಣದ ಬಳಿ ಭೂಕುಸಿತ ಉಂಟಾಗಿ ಏಳು ಜನರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, 20ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಶೋಧಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ನೋನಿ ಸೇನಾ ವೈದ್ಯಕೀಯ ಘಟಕಕ್ಕೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಕ್ಷಣಾ ಪಿಆರ್‌ಒ ಲೆಫ್ಟಿನೆಂಟ್ ಕರ್ನಲ್ ಸುಮಿತ್ ಕೆ ಶರ್ಮಾ ತಿಳಿಸಿದ್ದಾರೆ.
ಸಾವನ್ನಪ್ಪಿರುವವರಲ್ಲಿ ಅನೇಕರು ಸ್ಥಳೀಯ ಸೇನೆಗೆ ಸೇರಿದವರೆಂದು ಎಂದು ವರದಿಯಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss