ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಚಿಕ್ಕಬಳ್ಳಾಪುರ:
ತಡರಾತ್ರಿ ಸುರಿದ ಭಾರಿ ಮಳೆಗೆ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂಕುಸಿತ ಸಂಭವಿಸಿದ್ದು, 10 ಅಡಿ ಆಳಕ್ಕೆ ರಸ್ತೆ ಕುಸಿದಿದೆ.
ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಪರಿಣಾಮ ಸಂಚಾರ ಬಂದ್ ಮಾಡಲಾಗಿದ್ದು, ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.
ಮಳೆಯ ಆರ್ಭಟಕ್ಕೆ ವಿದ್ಯುತ್ ಕಂಬಗಳು ಧರೆಗುಳಿದಿದ್ದು, ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚೆಕ್ ಪೋಸ್ಟ್ ನ ಸಮೀಪದಲ್ಲಿ ಮಣ್ಣು ಕುಸಿದಿದ್ದು, ಮೊದಲೇ ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿರುವ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.