ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಯಘಡದ ಇರ್ಶಲವಾಡಿಯಲ್ಲಿ ಭೂಕಂಪ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ 27 ಮೃತದೇಹಗಳನ್ನ ಹೊರತೆಗೆಯಲಾಗಿದೆ, ಆದರೆ ಇನ್ನೂ 57ಮಂದಿ ನಾಪತ್ತೆಯಾಗಿದ್ದು, ಯಾವುದೇ ಸುಳಿವು ಸಿಕ್ಕಿಲ್ಲ. 27ಶವದಲ್ಲಿ ಒಬ್ಬರ ಗುರುತು ಮಾತ್ರ ಸಿಕ್ಕಿಲ್ಲ.
ಈವರೆಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ 1,000ಕ್ಕೂ ಹೆಚ್ಚು ಮಂದಿ ನಾಲ್ಕು ದಿನಗಳು ಶೋಧ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ. 27 ಮೃತದೇಹಗಳಲ್ಲಿ 12 ಪುರುಷರು, 10 ಮಹಿಳೆಯರು ಹಾಗೂ ನಾಲ್ಕು ಮಕ್ಕಳಿದ್ದಾರೆ.