Thursday, October 16, 2025

ಸಿಕ್ಕಿಂನಲ್ಲಿ ಭೂಕುಸಿತ: ಒಂದೇ ಕುಟುಂಬದ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿರಂತರ ಮಳೆಯಿಂದಾಗಿ ಸಿಕ್ಕಿಂನ ಗ್ಯಾಲ್ಶಿಂಗ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮನೆ ಮೇಲೆ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ.

ಮನೆಯಲ್ಲಿ ಒಂದು ಮಗು ತೀವ್ರವಾಗಿ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ಪರ್ ರಿಂಬಿ ಪ್ರದೇಶದಲ್ಲಿ ನಿನ್ನೆ ಮಧ್ಯರಾತ್ರಿ ಕುಟುಂಬ ಮನೆಯಲ್ಲಿ ನಿದ್ರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಭೂಕುಸಿತವು ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಸಿಕ್ಕಿಂ ಪೊಲೀಸರು, ಸಶಸ್ತ್ರ ಸೀಮಾ ಬಲ್(ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ನಿರಂತರ ಮಳೆಯ ಹೊರತಾಗಿಯೂ ಘಟನಾ ಸ್ಥಳಕ್ಕೆ ತೆರಳಿ ಕ್ಷಿಪ್ರವಾಗಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಹೇಳಲಾಗಿದೆ.

error: Content is protected !!