ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಚಮೋಲಿ ಜಿಲ್ಲೆಯ ಹೆಲಾಂಗ್ ಬಳಿಯ ಟಿಹೆಚ್‌ಡಿಸಿಯ ವಿಷ್ಣುಗಡ್ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ಶನಿವಾರ ಭೂಕುಸಿತ ಸಂಭವಿಸಿದ ಪರಿಣಾಮ ಹನ್ನೆರಡು ಕಾರ್ಮಿಕರು ಗಾಯಗೊಂಡಿದ್ದಾರೆ.
ಭೂಕುಸಿತ ಉಂಟಾದ ವೇಳೆ ಸ್ಥಳದಲ್ಲಿ ಸುಮಾರು 300 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಹೇಳಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಪಿಪಲ್ಕೋಟಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸುಮಾರು 70 ಕಾರ್ಮಿಕರು ಇದ್ದರು.
#Chamoli में हेलंग के पास डैम साईट पर भारी भू स्खलन, साईट पर काम कर रहे श्रमिकों ने भाग कर बचाई जान, कुछ के घायल होने की सूचना #landslide #disaster #joshimath pic.twitter.com/GyFU6HEtSF
— SUNIL NAVPRABHAT (@SunilNavprabhat) August 2, 2025