ಉತ್ತರಾಖಂಡದ ರುದ್ರಪ್ರಯಾಗ ಬಳಿ ಭೂಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಭೂಕುಸಿತದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎಸ್‌ಡಿಆರ್‌ಎಫ್) ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಭೂಕುಸಿತದಿಂದಾಗಿ 10 ರಿಂದ 12 ಜನರು ಅವಶೇಷಗಳಡಿ ಸಿಲುಕಿರುವ ಅಥವಾ ಕೊಚ್ಚಿಹೋಗಿರುವ ಭೀತಿಯಿದೆ. ಗೌರಿಕುಂಡ್ ಪೋಸ್ಟ್ ಸೇತುವೆ ಬಳಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಈ ದುರಂತ ಸಂಭವಿಸಿದೆ ಎಂದು ರುದ್ರಪ್ರಯಾಗ ವಿಪತ್ತು ನಿರ್ವಹಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ರುದ್ರಪ್ರಯಾಗ ವಿಪತ್ತು ನಿರ್ವಹಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!