ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್:
ಹಿಮಾಚಲ ಪ್ರದೇಶದಲ್ಲಿನ ಕಿನ್ನೌರ್ ಜಿಲ್ಲೆಯ ಬಸ್ತೇರಿ ಬಳಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬದವರಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರವಾಸಿಗರಿದ್ದ ಟೆಂಪೋ ಟ್ರಾವಲರ್ ಮೇಲೆ ಬಂಡೆಗಳು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಸಾಂಗ್ಲಾ ಹಾಗೂ ಚಿಟ್ಕುಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
An ex-gratia of Rs. 2 lakh each from PMNRF would be given to the next of kin of those who lost their lives in an accident in Kinnaur, Himachal Pradesh. Rs. 50,000 would be given to the injured: PM @narendramodi
— PMO India (@PMOIndia) July 25, 2021