ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇದಾರನಾಥ ದೇಗುಲಕ್ಕೆ ಪಾದಯಾತ್ರೆ ಮೂಲಕ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದು ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ.
ಜಂಗಲ್‌ಚಟ್ಟಿ ಘಾಟ್ ಬಳಿ ಬೆಳಿಗ್ಗೆ ಗುಡ್ಡ ಕುಸಿತ ಸಂಭವಿಸಿದ್ದು, ಬಂಡೆಗಳು ಉರುಳಿ ಬಿದ್ದ ಪರಿಣಾಮ ಪಲ್ಲಕ್ಕಿಯಲ್ಲಿ ಯಾತ್ರಿಕರನ್ನು ಹೊತ್ತು ಸಾಗುತ್ತಿದ್ದ ಪೋರ್ಟರ್ ನಿರ್ವಾಹಕರು ಇದರಡಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ರುದ್ರಪ್ರಯಾಗ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ತಕ್ಷಣವೇ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಗೌರಿಕುಂಡ್‌ನಲ್ಲಿರುವ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.