ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ತೆರವು ಕಾರ್ಯ ಭರದಿಂದ ಸಾಗಿದೆ.
ಬೆಂಗಳೂರು ಮತ್ತು ಮಂಗಳೂರು ನಡುವಿನ ವಾಹನ ಸಂಚಾರ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಮಣ್ಣು ತೆರವು ಕಾರ್ಯ ಚುರುಕುಗೊಂಡಿದ್ದು, ಸದ್ಯ ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಸುಗಮ ಸಂಚಾರಕ್ಕೆ ಇನ್ನೂ ಒಂದೆರಡು ಗಂಟೆಗಳ ಸಮಯಾವಕಾಶ ಅಗತ್ಯವಿದೆ.
ರಾಷ್ಟ್ರೀಯ ಹೆದ್ದಾರಿ .75 ರ ಧರ್ಮಸ್ಥಳ ಕ್ರಾಸ್ನಿಂದ ಸ್ವಲ್ಪ ಮುಂದೆ ಗುಡ್ಡ ಕುಸಿತ ಉಂಟಾಗಿದ್ದು, ಹೀಗಾಗಿ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಾಗಿದೆ.