ಮಲೇಷ್ಯಾದಲ್ಲಿ ಭೂಕುಸಿತ: ಎಂಟು ಮಂದಿ ಸಾವು, ಹಲವರು ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಲೇಷ್ಯಾದ ಕ್ಯಾಂಪ್‌ಸೈಟ್‌ನಲ್ಲಿ ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ 92 ಮಂದಿ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಶೋಧ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಇದುವರೆಗೂ 53 ಜನರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

ಮಲೇಷ್ಯಾದ ರಾಜಧಾನಿ ಕೌಲಾಲಂಪುರದ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ದುರಂತ ಘಟನೆಯ ಬಗ್ಗೆ ಮಾತನಾಡಿದ ರಕ್ಷಣಾ ವಿಭಾಗದ ನಿರ್ದೇಶಕರು, ಕ್ಯಾಂಪ್ ಸೈಟ್‌ನಿಂದ 30 ಮೀಟರ್ (100 ಅಡಿ) ಎತ್ತರದಿಂದ ಭೂಕುಸಿತವಾಗಿದ್ದು,  ಇದು ಸುಮಾರು ಒಂದು ಎಕರೆ ಪ್ರದೇಶವನ್ನು ಆವರಿಸಿದೆ ಎಂದರು.

ಸಾವನ್ನಪ್ಪಿದವರಲ್ಲಿ ಇಬ್ಬರು ಮಹಿಳೆಯರು ಮತ್ತು ಮಗುವನ್ನು ಪೊಲೀಸರು ಗುರುತಿಸಿದ್ದಾರೆ. ಅವರ ಉಳಿದ ದೇಹಗಳು ಭೂಕುಸಿತದ ಅಡಿಯಲ್ಲಿ ಬಿದ್ದು ಛಿದ್ರಗೊಂಡವು. ಮಣ್ಣಿನಡಿ ಸಿಲುಕಿರುವವರಲ್ಲಿ ಕೆಲವರು ಸಾವನ್ನಪ್ಪಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ರಕ್ಷಣಾ ತಂಡದ ಸಿಬ್ಬಂದಿ ಸಾಧ್ಯವಾದಷ್ಟು ಜನರನ್ನು ರಕ್ಷಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!