ಮಹಾರಾಷ್ಟ್ರದಲ್ಲಿ ಭೂಕುಸಿತ: ನಾಲ್ವರ ಸಾವು, ಹಲವಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿ ಗ್ರಾಮದಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವಾರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಘಟನಾಸ್ಥಳದಲ್ಲಿ ಈವರೆಗೆ 25 ಮಂದಿಯನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಎಂಎ) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಯಗಢ ಸ್ಥಳೀಯಾಡಳಿತ ಮತ್ತು ಪೊಲೀಸ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಮಹಾರಾಷ್ಟ್ರ ಪರ್ವತಾರೋಹಿಗಳ ತಂಡವನ್ನು (ಎಂಎಂಆರ್‌ಸಿಸಿ) ಸ್ಥಳಕ್ಕೆ ರವಾನಿಸಲಾಗಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ನಿರಂತರವಾಗಿ ಸುರಿದ ಮಳೆಯ ನಡುವೆ, ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ರಾಯಗಢಕ್ಕೆ “ರೆಡ್ ಅಲರ್ಟ್” ಘೋಷಿಸಿದೆ. ಭೂಕುಸಿತ ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್‌ಎಫ್) ಗೆ ಸಹಾಯ ಮಾಡಲು ಜಿಲ್ಲಾಡಳಿತವು ಎನ್‌ಜಿಒಗಳಿಗೆ ಮನವಿ ಮಾಡಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮೂವರು ಸಚಿವರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!