Monday, August 8, 2022

Latest Posts

ದೀಪಾವಳಿ ವೇಳೆಗೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ ಸಾಧ್ಯತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಈಗಾಗಲೇ ಪೆಟ್ರೋಲ್, ಡಿಸೇಲ್ ದರ ಏರಿಕೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ಮತ್ತೆ ದೀಪಾವಳಿ ವೇಳೆಗೆ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಂತಾರಾಷ್ಟ್ರೀಯ ದರ ಏರಿಕೆಯ ಹಿನ್ನೆಲೆ ಎಲ್ ಪಿಜಿ ಸಿಲಿಂಡರ್ ಮೇಲಿನ ನಷ್ಟ ಹೆಚ್ಚಾಗಿದೆ. ಹಾಗಾಗಿ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದರ ಹೆಚ್ಚಳವು ಸರ್ಕಾರದ ಅನುಮತಿಯ ಮೇಲೆ ಅವಲಂಬಿತವಾಗಿರುತ್ತದೆ.

ನವೆಂಬರ್ 1ರಂದು ಪರಿಷ್ಕರಣೆಯಾಗಲಿರುವ ಎಲ್‌ಪಿಜಿ ಸಿಲಿಂಡರ್ ದರದ ವೇಳೆ ಭಾರೀ ಪ್ರಮಾಣದಲ್ಲಿ ದರ ಹೆಚ್ಚಳವಾಗಲಿದೆ. ಕಳೆದ ಜುಲೈನಿಂದ ಈವರೆಗೆ 14 ಕೆಜಿಯ ಸಿಲಿಂಡರ್‌ ಬೆಲೆಯಲ್ಲಿ 90 ರುಪಾಯಿ ಏರಿಕೆಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss