ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದವರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರದಲ್ಲಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ರೆಡ್ಡಿಗೊಲ್ಲವಾರಹಳ್ಳ ಬಳಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಾಸಾಗುತ್ತಿದ್ದರು. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಧರಣೀಶ್, ನಿರಂಜನ್ ಸಿಂಗ್ ಮೃತರು.
ಪಂಕ್ಚರ್ ಆಗಿದ್ದ ಕಾರನ್ನು ಸೈಡ್‌ಗೆ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಲಾರಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!