ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:
ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ನಡೆದಿದೆ.
ಆಂಧ್ರಪ್ರದೇಶ-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಕೊಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರು ಎನ್ನಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಜೀಪಿನ ಚಾಲಕ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದ 49 ವರ್ಷದ ರಮೇಶ್, ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದ 50 ವರ್ಷದ ಮುನಿರತ್ನಮ್ಮ, ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯ 60 ವರ್ಷದ ನಾರಾಯಣಸ್ವಾಮಿ, ಆಂಧ್ರಪ್ರದೇಶದ ಮದನಪಲ್ಲಿ ತಾಲೂಕಿನ ನರಸಿಂಗನಹಳ್ಳಿಯ 45 ವರ್ಷದ ವೆಂಕಟಲಕ್ಷ್ಮಮ್ಮ ಸೇರಿ ಇತರರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಶ್ರೀನಿವಾಸಪುರ ತಾಲೂಕಿನ ನಂಬವಾರಿ ಪಲ್ಲಿ ಗ್ರಾಮದ 50 ವರ್ಷದ ಸತ್ಯಪ್ಪ, ಸೋಮಕಲಹಳ್ಳಿ ಗ್ರಾಮದ 55 ವರ್ಷದ ವೆಂಕಟ ಲಕ್ಷ್ಮಮ್ಮ, ರಾಯಲ್ಪಾಡು ಗ್ರಾಮದ ಕಸ್ತೂರಮ್ಮ, ಬೆಂಗಳೂರು ಕೆ.ಅರ್.ಪುರಂನ ಅಂಬರೀಶ್, ಚಿಂತಾಮಣಿ ತಾಲೂಕಿನ ಕೊಂಡವೆನಕಪಲ್ಲಿಯ ಕೃಷ್ಣಮ್ಮ, ಶಿಡ್ಲಘಟ್ಟ ತಾಲೂಕಿನ ದಿಬ್ಬೂರು ಹಳ್ಳಿಯ ಯಶೋದಮ್ಮ, ಮಣಿಗಾನಹಳ್ಳಿಯ 35 ವರ್ಷದ ವೆಂಕಟಲಕ್ಷ್ಮಮ್ಮ ಮಣಿಗಾನಪಲ್ಲಿ ಗ್ರಾಮದ 8ವರ್ಷದ ಮೌನೇಶ್ ಮತ್ತು 1 ವರ್ಷದ ಹೆಣ್ಣು ಮಗು, ಮತ್ತು 30 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಜುಳಾ ಬಿನ್ ರೆಡ್ಡಪ್ಪ ಎಂದು ಗುರುತಿಸಲಾಗಿದೆ.
ಅಪಘಾತಕ್ಕೀಡಾದ ಜೀಪ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಕಡೆಯಿಂದ ಚಿಂತಾಮಣಿ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಸೇರಿದಂತೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.