May 31, 2026
Sunday, May 31, 2026
spot_img

ಲಾಹೋರ್‌ನಲ್ಲಿ ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ: ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಲಾಹೋರ್ ನಗರದಲ್ಲಿ ಲಷ್ಕರ್-ಎ-ತೊಯ್ಬಾದ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುರುವಾರ ನಡೆದ ಗುಂಡಿನ ದಾಳಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಅಪರಿಚಿತ ದುಷ್ಕರ್ಮಿಗಳು ರಸ್ತೆ ಮಧ್ಯೆ ಹಠಾತ್ ದಾಳಿ ನಡೆಸಿ ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡ ಹಮ್ಜಾನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಚಿಂತಾಜನಕವಾಗಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಅವರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ.

ಇದನ್ನೂ ಓದಿ:

ಅಮೀರ್ ಹಮ್ಜಾ ಲಷ್ಕರ್ ಸಂಘಟನೆಯ ಪ್ರಮುಖ ತತ್ವಜ್ಞ ಹಾಗೂ ಹಾಫಿಜ್ ಸಯೀದ್ ಬಳಿಕ ಎರಡನೇ ಅತಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದಾನೆ. ಉಗ್ರ ಸಂಘಟನೆಗೆ ಸಿದ್ಧಾಂತಾತ್ಮಕ ಬೆಂಬಲ ನೀಡುವುದು, ಯುವಕರನ್ನು ಪ್ರಚೋದಿಸುವ ಭಾಷಣಗಳು ಹಾಗೂ ನಿಧಿ ಸಂಗ್ರಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಅಮೆರಿಕಾ ಖಜಾನೆ ಇಲಾಖೆ ಕೂಡ ಈತನನ್ನು ಜಾಗತಿಕ ಭಯೋತ್ಪಾದಕನ ಪಟ್ಟಿಯಲ್ಲಿ ಸೇರಿಸಿತ್ತು.

ದಾಳಿಯ ಬಳಿಕ ಲಾಹೋರ್ ನಗರದಲ್ಲಿ ಭದ್ರತೆಯನ್ನು ಕಟ್ಟು ನಿಟ್ಟಾಗಿಸಲಾಗಿದ್ದು, ಪೊಲೀಸರು ಹಾಗೂ ಗುಪ್ತಚರ ಸಂಸ್ಥೆಗಳು ತನಿಖೆ ಆರಂಭಿಸಿವೆ. ಆದರೆ ದಾಳಿಕೋರರ ಕುರಿತು ಇನ್ನೂ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿಲ್ಲ ಎಂದು ವರದಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !