ರಾಜಸ್ಥಾನ ರಾಯಲ್ಸ್​ ತಂಡಕ್ಕೆ ಲಸಿತ್ ಮಲಿಂಗ ಎಂಟ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಲಿಂಗ ಈ ಬಾರಿಯ ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್​ ತಂಡದ ಬೌಲಿಂಗ್ ಕೋಚ್​​ ಆಗಿ ಸೇರ್ಪಡೆಯಾಗಿದ್ದಾರೆ.

ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್​​ 5 ಬಾರಿ ಚಾಂಪಿಯನ್​ ಆಗುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಮಲಿಂಗ ಇದೀಗ ರಾಜಸ್ಥಾನ ತಂಡ ಸೇರಿಕೊಳ್ಳಲಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಫ್ರಾಂಚೈಸಿ ಅಧಿಕೃತ ಮಾಹಿತಿ ತಿಳಿಸಿದೆ.

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ 38 ವರ್ಷದ ಮಲಿಂಗ ಐಪಿಎಲ್​​ನಲ್ಲಿ 122 ಪಂದ್ಯಗಳನ್ನಾಡಿದ್ದು, 170 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ಪರ ಮಲಿಂಗ 122 ಪಂದ್ಯಗಳನ್ನಾಡಿ 170 ವಿಕೆಟ್ ಕಬಳಿಸುವ ಮೂಲಕ ಐಪಿಎಲ್‌ನಲ್ಲಿ ಗರಿಷ್ಠ ವಿಕೆಟ್‌ ಪಡೆದ ಬೌಲರ್ ಎನ್ನುವ ದಾಖಲೆಯನ್ನೂ ತನ್ನದಾಗಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here