August 3, 2026
Monday, August 3, 2026
spot_img

ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಕೊನೆಯ ಕ್ಷಣದ ಟ್ವಿಸ್ಟ್: ಮಂಕಾಳು ವೈದ್ಯರ ಹೆಸರು ಕೈಬಿಟ್ಟಿದ್ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವೇಳೆ ಕೊನೆಯ ಕ್ಷಣದಲ್ಲಿ ನಡೆದ ಬದಲಾವಣೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಹೌದು! ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಪಟ್ಟಿಯಲ್ಲಿದ್ದ ಹೊರತಾಗಿಯೂ ಅಂತಿಮವಾಗಿ ಅವರಿಗೆ ಸಚಿವ ಸ್ಥಾನ ಲಭಿಸಲಿಲ್ಲ. ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್‌ಗೆ ಸಚಿವ ಸ್ಥಾನ ನೀಡಲಾಗಿದೆ.

ಎಐಸಿಸಿ ಸ್ಪಷ್ಟನೆ ಏನು?

ಈ ಬೆಳವಣಿಗೆ ಕುರಿತು ಎಐಸಿಸಿ ಸ್ಪಷ್ಟನೆ ನೀಡಿದ್ದು, ಮಂಕಾಳು ವೈದ್ಯ ಅವರ ಹೆಸರು ಅಧಿಕೃತ ಸಚಿವರ ಪಟ್ಟಿಯಲ್ಲಿ ಇರಲಿಲ್ಲ ಎಂದು ತಿಳಿಸಿದೆ. ಮೊದಲ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದ್ದು ಕೇವಲ ಟೈಪಿಂಗ್ ದೋಷದಿಂದ ಸಂಭವಿಸಿದ ಗೊಂದಲ ಎಂದು ಹೇಳಲಾಗಿದೆ. ಅಂತಿಮವಾಗಿ ಅನುಮೋದನೆಯಾದ ಪಟ್ಟಿಯಲ್ಲೇ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರ ಹೆಸರು ಸೇರಿತ್ತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಎಂ ಭೇಟಿಗೆ ಬಂದ ಮಂಕಾಳು ವೈದ್ಯ

ಸಚಿವ ಸ್ಥಾನ ಕೈತಪ್ಪಿದ ಬಳಿಕ ಮಂಕಾಳು ವೈದ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದರು. ಆದರೆ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ಬಳಿಕ ಮತ್ತೊಮ್ಮೆ ಭೇಟಿಗೆ ಪ್ರಯತ್ನಿಸುವುದಾಗಿ ಹೇಳಿ ಅಲ್ಲಿಂದ ನಿರ್ಗಮಿಸಿದರು.

ಇದನ್ನೂ ಓದಿ:

ಎಸ್‌.ಎಸ್‌. ಮಲ್ಲಿಕಾರ್ಜುನ್‌ಗೆ ಅವಕಾಶ ಸಿಕ್ಕ ಹಿನ್ನೆಲೆ

ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡುವ ನಿರ್ಧಾರದ ಹಿಂದೆ ಹಲವು ರಾಜಕೀಯ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಆದರೆ ಈ ಕುರಿತು ಕಾಂಗ್ರೆಸ್ ನಾಯಕತ್ವ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಸಚಿವ ಸಂಪುಟ ವಿಸ್ತರಣೆಯ ಈ ಬೆಳವಣಿಗೆ ಕಾಂಗ್ರೆಸ್‌ನೊಳಗಿನ ರಾಜಕೀಯ ಚಟುವಟಿಕೆಗಳಿಗೆ ಹೊಸ ತಿರುವು ನೀಡಿದ್ದು, ಮುಂದಿನ ದಿನಗಳಲ್ಲಿ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸಲು ಪಕ್ಷದ ನಾಯಕತ್ವ ಯಾವ ಕ್ರಮ ಕೈಗೊಳ್ಳಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !