ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಯಕಿ ಲತಾ ಮಂಗೇಶ್ಕರ್ (92) ಅವರ ಆರೋಗ್ಯದಲ್ಲಿ ಸುಧಾರಣೆಯ ಲಕ್ಷಣಗಳು ಕಂಡು ಬರುತ್ತಿದ್ದು, ಸದ್ಯ ಐಸಿಯುನಲ್ಲೇ ಚಿಕಿತ್ಸೆ ಮುಂದುವರೆದಿದೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಜನವರಿ 9ರಂದು ಕೋವಿಡ್ ಹಿನ್ನೆಲೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.
ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯ ಸಹ ಪ್ರಾಧ್ಯಾಪಕಿ ಡಾ. ಪ್ರತೀತ್ ಸಮ್ದಾನಿ, ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿದೆ. ಆದರೆ, ಎಷ್ಟು ದಿನ ಆಸ್ಪತ್ರೆಯಲ್ಲಿರುತ್ತಾರೆ ಎಂದು ಹೇಳುವುದು ಕಷ್ಟ ಎಂದರು.
ಇನ್ನು ಲತಾ ದೀದಿ ಆರೋಗ್ಯದ ಕುರಿತ ಸುಳ್ಳು ಸುದ್ದಿ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಲತಾ ಮಂಗೇಶ್ಕರ್ರ ವಕ್ತಾರರು ಮನವಿ ಮಾಡಿದ್ದಾರೆ.