Wednesday, November 30, 2022

Latest Posts

ನಿವಾಸಕ್ಕೆ ತಲುಪಿದ ಲತಾ ಮಂಗೇಶ್ಕರ್ ಪಾರ್ಥಿವ ಶರೀರ: ಸಂಜೆ ನೆರವೇರಲಿದೆ ಅಂತಿಮ ಸಂಸ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದು ಮುಂಜಾನೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನುಮಹಾರಾಷ್ಟ್ರದ ಪೆದ್ದಾರ್ ರಸ್ತೆಯಲ್ಲಿರುವ ಅವರ ನಿವಾಸ ಪ್ರಭುಕುಂಜ್​​ಗೆ ತರಲಾಗಿದೆ. ಇಂದು ಸಂಜೆ ಅಂತಿಮ ಸಂಸ್ಕಾರ ನೆರವೇರಲಿದೆ.
ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನೆರವೇರಲಿದ್ದು, ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ.
2 ದಿನಗಳ ರಾಷ್ಟ್ರೀಯ ಶೋಕಾಚರಣೆ:
ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಎರಡು ದಿನಗಳ ಶೋಕಾಚರಣೆಯನ್ನು (ಫೆಬ್ರವರಿ 6ರಿಂದ ಫೆಬ್ರವರಿ 7ವರೆಗೆ) ಆಚರಿಸಲುಕೇಂದ್ರ ಸರ್ಕಾರ ನಿರ್ಧರಿಸಿದೆ. ಶೋಕಾಚರಣೆಯ ಸಮಯದಲ್ಲಿ, ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!