ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯದ ಬಗ್ಗೆ ಇಡೀ ದೇಶದಲ್ಲಿ ಸಾಕಷ್ಟು ವದಂತಿಗಳು ಕೇಳಿಬರುತ್ತಿವೆ. ಆದರೆ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಬಗ್ಗೆ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಕೂಡ ಟ್ವೀಟ್‌ ಮಾಡಿದ್ದು, ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿರವಾಗಿದೆ. ವಂದಂತಿಗಳಿಗೆ ಸುದ್ದಿಗೆ ಕಿವಿಗೊಡದಿರಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ʼಗಾಯಕಿ ಲತಾ ಮಂಗೇಶ್ಕರ್ ಇನ್ನೂ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ’ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಪ್ರತೀತ್ ಸಮ್ದಾನಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!