LATEST UPDATE | ಫಿರೋಜ್‌ಪುರದಲ್ಲಿ ಪಾಕ್ ಡ್ರೋನ್ ದಾಳಿಯಲ್ಲಿ ಗಾಯಗೊಂಡ ಕುಟುಂಬ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಂಜಾಬ್ ನ ಫಿರೋಜ್ ಪುರದಲ್ಲಿ ಪಾಕಿಸ್ತಾನದ ಡ್ರೋನ್ ಮನೆಯೊಂದರ ಮೇಲೆ ಅಪ್ಪಳಿಸಿದೆ. 2-3 ಜನರಿಗೆ ಗಾಯವಾಗಿದೆ.

ಇಂದು ಪಾಕಿಸ್ತಾನ ಮತ್ತೆ ಭಾರತದ ಮೇಲೆ ಡ್ರೋನ್ ದಾಳಿ ಶುರು ಮಾಡಿದ್ದು , ಜಮ್ಮು-ಕಾಶ್ಮೀರ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಆದ್ರೆ ಭಾರತ ಈ ದಾಳಿಯನ್ನುಹೊಡೆದುರುಳಿಸಿದೆ.
ಇದರ ನಡುವೆ ಪಾಕ್ ಡ್ರೋನ್ ಫಿರೋಜ್ ಪುರದಲ್ಲಿ ಮನೆಯೊಂದರ ಮೇಲೆ ಅಪ್ಪಳಿಸಿದ್ದು, ಕೆಲವರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮಧ್ಯೆ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಹೈವೋಲ್ಟೇಜ್‌ ಸಭೆ ನಡೆಯುತ್ತಿದ್ದು, ಪಾಕಿಸ್ತಾನದ ವಿರುದ್ಧ ಕಠಿನ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆ ಇದೆ. ಸಚಿವರಾದ ಜೈಶಂಕರ್‌, ರಾಜನಾಥ್‌ ಸಿಂಗ್‌ ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!