ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮುವಿನ ಮೇಲೆ ಪಾಕಿಸ್ತಾನ ಹಾರಿಸಿದ ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿ ಪ್ರತ್ಯುತ್ತರ ನೀಡಿದ್ದು , ಇದರ ಬೆನ್ನಲ್ಲೇ ಪಾಕಿಸ್ತಾನದ ಮೂರು ಫೈಟರ್ ಜೆಟ್ ಅನ್ನು ಹೊಡೆದುರುಳಿಸಿದೆ.
ಅಮೆರಿಕದಿಂದ ಖರೀದಿ ಮಾಡಿದ್ದ ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಅನ್ನು ಭಾರತದ ಬಲಿಷ್ಠ ವಾಯು ಸೇನೆ ಹೊಡೆದುರಳಿಸಿದೆ.
ಜಮ್ಮುವಿನಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದವು. ನಂತರ ಸೈರನ್ಗಳ ಕೂಗು ಕೇಳಿಬಂತು. ತಕ್ಷಣ ವಿದ್ಯುತ್ ಕಡಿತವಾಯಿತು. ದಾಳಿ ಇನ್ನೂ ಮುಂದುವರಿದಿದೆ. ಪರಿಣಾಮವಾಗಿ ಸೆಲ್ಫೋನ್ ಸೇವೆ ಸ್ಥಗಿತಗೊಂಡಿದೆ.ಪಂಜಾಬ್ನ ಹತ್ತಿರದ ಪಟ್ಟಣವಾದ ಗುರುದಾಸ್ಪುರದಲ್ಲಿ ಬ್ಲ್ಯಾಕೌಟ್ ಘೋಷಿಸಲಾಯಿತು
6 ಕಡೆಗಳಲ್ಲಿ ಡ್ರೋನ್ ದಾಳಿಗೆ ಪಾಕ್ ಯತ್ನಿಸಿದೆ. ಚನಿ ಹಿಮತ್, ಆರ್ಎಸ್ ಪುರ, ಜಮ್ಮುವಿನಲ್ಲಿ ಡ್ರೋನ್ ದಾಳಿ ನಡೆಸಲಾಗಿದೆ. ಆದ್ರೆ ಇದನ್ನೆಲ್ಲ ಸೇನೆ ಹೊಡೆದುರುಳಿಸಿದೆ. ಸದ್ಯ ಜಮ್ಮುವಿನಾದ್ಯಂತ ವಾಯು ದಾಳಿ ಸೈರನ್ ಮೊಳಗಿದೆ.
ಎಫ್- 16 ಹೆಸರಿನ ಒಂದು ಫೈಟರ್ ಜೆಟ್ ಹಾಗೂ ಜೆಎಫ್-17 ಹೆಸರಿನ ಎರಡು ಯುದ್ಧ ವಿಮಾನಗಳನ್ನು ಭಾರತದ ವಾಯು ಸೇನೆ ನೆಲಕ್ಕುರುಳಿಸಿದೆ. ಇದರಿಂದ ಪಾಕಿಸ್ತಾನಕ್ಕೆ ಮತ್ತೆ ಭಾರೀ ಪೆಟ್ಟು ಬಿದ್ದಂತೆ ಆಗಿದೆ.
ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ