ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಹಾರದ ಬಿಜೆಪಿ ಮುಖಂಡ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಪಾಟ್ನಾದಲ್ಲಿ ಶಿಕ್ಷಕರ ನೇಮಕಾತಿ ನಿಯಮಾವಳಿ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದೂ, ಈ ಕ್ಷಣ ಬಿಜೆಪಿ ನಾಯಕರೊಬ್ಬರು (BJP Leader) ಮೃತಪಟ್ಟಿದ್ದಾರೆ.

ಬಿಹಾರ ಸರ್ಕಾರದ (Bihar Government) ವಿರುದ್ಧಬಿಜೆಪಿ ಪ್ರತಿಭಟನೆ (Protest) ಆಯೋಜಿಸಿತ್ತು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೋಗುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಲಾಠಿಯಿಂದ ಬಲವಾಗಿ ಏಟು ತಿಂದಿದ್ದ ಜೆಹಾನಾಬಾದ್ ಜಿಲ್ಲೆಯ ಅಧ್ಯಕ್ಷ ವಿಜಯ್‌ ಕುಮಾರ್‌ ಸಿಂಗ್‌ (Vijay Kumar Singh) ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟು ಹೊತ್ತಿಗೆ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here