BOLLYWOOD| ಸಲ್ಮಾನ್ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ಮಂಗಳವಾರ ತಮ್ಮ 57ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು. ಬಾಲಿವುಡ್ ಸೆಲೆಬ್ರಿಟಿಗಳಿಗಾಗಿ ಸಲ್ಮಾನ್ ವಿಶೇಷ ಪಾರ್ಟಿ ಆಯೋಜಿಸಿದ್ದರು. ಅವರ ಹುಟ್ಟುಹಬ್ಬಕ್ಕೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಸಲ್ಮಾನ್ ಹುಟ್ಟುಹಬ್ಬ ಇದ್ದ ಕಾರಣ ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸಕ್ಕೆ ಅಭಿಮಾನಿಗಳ ದಂಡೇ ವಿಷ್‌ ಮಾಡಲು ಆಗಮಿಸಿದ್ದರು.

ತಮ್ಮ ನೆಚ್ಚಿನ ನಾಯಕನನ್ನು ನೋಡಲು ಮತ್ತು ಹಾರೈಸಲು ಅಭಿಮಾನಿಗಳು ಸಲ್ಮಾನ್ ಮನೆಗೆ ಆಗಮಿಸಿದ್ದರಿಂದ ಇಡೀ ಪ್ರದೇಶ ಜನರಿಂದ ತುಂಬಿತ್ತು. ರಸ್ತೆಯಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಇದೇ ವೇಳೆಗೆ ಸಲ್ಮಾನ್ ಮನೆಗೆ ಆಗಮಿಸಿ ಅಭಿಮಾನಿಗಳಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳೆಲ್ಲ ಮುಂದೆ ಬಂದು ಗಲಾಟೆ ಸೃಷ್ಟಿಸಿದ್ದಾರೆ.

ಪೊಲೀಸರ ಮಾತು ಕೇಳದೆ ಸಲ್ಮಾನ್ ಅಭಿಮಾನಿಗಳು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಎಲ್ಲರೂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿವೆ. ಪೊಲೀಸರು ಎಷ್ಟು ಬಾರಿ ಹೇಳಿದರೂ ಕೇಳದ ಕಾರಣ ಅವರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಬೇಕಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!