ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದರು. ಲಾಠಿ ಚಾರ್ಜ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ನೀವು ಮಾಡಿದ್ದು ಸರಿ ಎಂದು ಹೇಳಿದ್ದಾರೆ.
ಬಂಧನ ಹಾಗೂ ಪ್ರತಿಭಟನೆ ಕುರಿತು ಸಿದ್ದರಾಮಯ್ಯ ಅವರಿಗೆ ಡಿಸಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಗಲಭೆಯ ಸಂಪೂರ್ಣ ವಿಡಿಯೋ ದೃಶ್ಯಾವಳಿ ವೀಕ್ಷಿಸಿದರು. ಪ್ರತಿಭಟನೆ ವೇಳೆ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದಾರೆ ಎಂದು ಆದೇಶ ಪ್ರತಿ ಸಮೇತ ಸಿದ್ದರಾಮಯ್ಯಗೆ ವಿವರಣೆ ನೀಡಲಾಯಿತು.
ಹೋರಾಟಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ಸ್ಥಳದಿಂದ ತೆರಳದಂತೆ ಹಾಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಆದೇಶ ನೀಡಲಾಗಿತ್ತು. ಹೈಕೋರ್ಟ್ ಆದೇಶ ಪಾಲಿಸಲು ಲಾಠಿ ಚಾರ್ಜ್ ಮಾಡಿದ್ದೇವೆ ಎಂದು ಅಧಿಕಾರಿಗಳು ಸಿಎಂಗೆ ತಿಳಿಸಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೈಕೋರ್ಟ್ ಆದೇಶ ಪಾಲನೆ ಮಾಡಿದ್ದು ಒಳ್ಳೆಯದು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.