ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು: ಪೊಲೀಸರಿಂದ ಲಾಠಿ ಚಾರ್ಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಚುನಾವಣೆ ಹಿನ್ನೆಲೆ ಅಖಾಡಕ್ಕಿಳಿದು ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್‌ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ನಟನನ್ನು ನೋಡಲು ಮುಗಿಬಿದ್ದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ಇಂದು ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಶಿವನಗೌಡ ನಾಯಕ್‌ ಪರ ನಟ ಕಿಚ್ಚ ಸುದೀಪ್‌ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು, ಜನರು ಕಿಚ್ಚನನ್ನು ನೋಡಲು ಮುಗಿಬಿದ್ದಿದ್ದಾರೆ. ಈ ವೇಳೆ ನೂಕಾಟ, ತಳ್ಳಾಟ ನಡೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!