ಬೆಂಗಳೂರು ವಿವಿಯಲ್ಲಿ ಲಾಠಿ ಚಾರ್ಜ್: ಹಲವು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಲಾಠಿ ಚಾರ್ಜ್ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿತ್ತು. ಪರೀಕ್ಷೆ ಮೌಲ್ಯಮಾಪನ ಹಾಗೂ ಫಲಿತಾಂಶದಲ್ಲಿ ಸಮಸ್ಯೆಯಾಗಿದೆ, ಇದು ಶೀಘ್ರವೇ ಬಗೆಹರಿಯಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!