ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಪ್ರವಾಸೋದ್ಯಮ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಉದ್ದೇಶದಿಂದ ಬ್ರ್ಯಾಂಡ್ ಮೈಸೂರು ಲೋಗೋ ಉದ್ಘಾಟನೆ ಮಾಡಲಾಗಿದೆ.
ಮೈಸೂರು ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡ್ ಆಗಬೇಕು ಎನ್ನುವ ಉದ್ದೇಶದಿಂದ ನಮ್ಮ ಪರಂಪರೆ, ನಿಮ್ಮ ತಾಣ ಎನ್ನುವ ಟ್ಯಾಗ್‌ಲೈನ್‌ನೊಂದಿಗೆ ಹೊಸ ಲೋಗೋ ಬಿಡುಗಡೆಯಾಗಿದೆ.
ಮೈಸೂರನ್ನು ಬ್ರ್ಯಾಂಡ್ ಮಾಡುವಲ್ಲಿ ಇದು ದೊಡ್ಡ ಹೆಜ್ಜೆಯಾಗಿದೆ. ಮೈಸೂರು ಬರೀ ಅರಮನೆ ನಗರಿ ಅಲ್ಲ, ಇಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿವೆ ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.