ಹೊಸದಿಗಂತ ವರದಿ, ವಿಜಯಪುರ
ನಗರ ಹೊರ ವಲಯ ಇಟ್ಟಂಗಿಹಾಳ ರಸ್ತೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ ಧರ್ಮ, ಸಂಸ್ಕೃತಿ ಮತ್ತು ರಾಷ್ಟ್ರೀಯತೆ ಕುರಿತ ಒಂದು ದಿನದ ವಿಚಾರ ಸಂಕಿರಣಕ್ಕೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ರಾಮ ಮಾಧವ ಚಾಲನೆ ನೀಡಿದರು.
ಪ್ರಜ್ಞಾ ಪ್ರವಾಹದ ದಕ್ಷಿಣ ಮಧ್ಯ ಕ್ಷೇತ್ರಿಯ ಸಂಯೋಜಕ ರಘುನಂದನ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ, ವಿಸ್ತಾರ ಮಿಡಿಯಾದ ನಿರ್ದೇಶಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಕಾಶ ಕೋಣೆಮನಿ, ಅಂಕಣಕಾರ ರೋಹಿತ ಚಕ್ರತೀರ್ಥ, ಸಂಕಿರಣ ಅಧ್ಯಕ್ಷ ಶಿವಾನಂದ ಕೆಲೂರ ಇದ್ದರು.