spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ 1 ಸಾವಿರ ರೀಚಾರ್ಜಿಂಗ್ ಸೆಂಟರ್ ಆರಂಭ: ಸಚಿವ ಸುನಿಲ್ ಕುಮಾರ್

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ 1 ಸಾವಿರ ರೀಚಾರ್ಜಿಂಗ್ ಸೆಂಟರ್ ತೆರೆಯುತ್ತೇವೆ. ಬೆಂಗಳೂರು ಒಂದರಲ್ಲೇ 500 ಸೆಂಟರ್ ತೆರೆಯುವ ಸಾಧ್ಯತೆಯಿದೆ ಎಂದು ಬೆಂಗಳೂರಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಬೇಕಾಗಿದೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಹೀಗಾಗಿ ಅಪಾರ್ಟ್‌ಮೆಂಟ್, ಮಾಲ್, ಸರ್ಕಾರಿ ಕಚೇರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ, ಪ್ರವಾಸೋದ್ಯಮ ಜಾಗಗಳಲ್ಲಿ ರೀಚಾರ್ಜಿಂಗ್ ಸೆಂಟರ್ ಮಾಡಬೇಕು ಎಂದು ಆಲೋಚನೆಯಿದೆ. ಈ ಕುರಿತು ವಾಹನಗಳನ್ನು ತಯಾರಿಸುವ ಮಾಲೀಕರ ಜತೆ ಕಾರ್ಯಾಗಾರ ಮಾಡುವ ಮೂಲಕ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.
ವಿದ್ಯುತ್​ ಚಾಲಿತ ವಾಹನಗಳಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ. ಈ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್​ ಸೆಂಟರ್​ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ. ಇದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss