ಪತಿಯ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕಾನೂನು ಸಾಧನವಾಗಿಬಳಸಬಾರದು: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A(ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ವೈಯಕ್ತಿಕ ದ್ವೇಷ ಸಾಧಿಸಲು ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿಬಳಸಬಾರದು ಎಂದು ಹೇಳಿದೆ.

ನಿರ್ದಿಷ್ಟವಾಗಿ ಮಹಿಳೆಯರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನ್ನ ಅವಿವೇಕದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ವಿಚ್ಛೇದನಕ್ಕೆ ಪತಿ ಮನವಿ ಸಲ್ಲಿಸಿದ ನಂತರ ಪತ್ನಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಸೆಕ್ಷನ್ 498 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಗೊಳಿಸಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪತಿ ಮತ್ತು ಆತನ ಕುಟುಂಬದ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕೆಲ ಮಹಿಳೆಯರು ಈ ನಿಬಂಧನೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಪ್ರಕರಣವನ್ನು ರದ್ದುಗೊಳಿಸಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ, ಕ್ರೌರ್ಯದ ಆರೋಪ ಹೊತ್ತಿರುವ ವ್ಯಕ್ತಿ ಮತ್ತು ಆತನ ಕುಟುಂಬದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಮತ್ತು ಪ್ರಕರಣವನ್ನು ಮುಂದುವರಿಸಲು ಅನುಮತಿಸುವ ಹೈಕೋರ್ಟ್‌ ನಿರ್ಧಾರವನ್ನು ರದ್ದುಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!