ಅಂಕೋಲಾದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ರೂಪಾಲಿ ನಾಯ್ಕ ಭೂಮಿ ಪೂಜೆ

ಹೊಸದಿಗಂತ ವರದಿ,ಅಂಕೋಲಾ:

ಮುಖ್ಯ ಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ಅಂಕೋಲಾ ತಾಲೂಕಿನ ಪುರಸಭೆ ವ್ಯಾಪ್ತಿಯಲ್ಲಿ 3.30 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಂಕೋಲಾ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ವಿವಿಧ ಯೋಜನೆಗಳ ಮೂಲಕ
ಕಾರವಾರ ಮತ್ತು ಅಂಕೋಲಾ ತಾಲೂಕುಗಳು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವ ಸಂದರ್ಭದಲ್ಲಿ ಪಟ್ಟಣದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಬೇಕಾದ ಅಗತ್ಯತೆ ಇದ್ದು ರಾಷ್ಟ್ರೀಯ ಹೆದ್ದಾರಿಯಿಂದ ಅಂಕೋಲಾ ಪಟ್ಟಣ ಪ್ರವೇಶ ಮಾಡುವ ರಸ್ತೆಗೆ ಒಂದು ಸುಂದರ ರೂಪ ನೀಡಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.
ಪುರಸಭೆಯ ಹಲವಾರು ವಾರ್ಡ್ ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಗತ್ಯತೆಯನ್ನು ಮನಗೊಂಡು 3ಕೋಟಿಗೂ ಅಧಿಕ ಅನುದಾನದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲಾಗುವುದು ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷೆ ರೇಖಾ ಗಾಂವಕರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಾ ನಾಯ್ಕ, ತಹಶೀಲ್ಧಾರ ಉದಯ ಕುಂಬಾರ,ಪುರಸಭೆ ಮುಖ್ಯಾಧಿಕಾರಿ ಶೃತಿ ಗಾಯಕವಾಡ್ ತಾ.ಪಂ ಕಾರ್ಯನಿರ್ವಹಣ ಅಧಿಕಾರಿ ಪಿ ವೈ ಸಾವಂತ್ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!