ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಪುರ್ನಿಯಾದ ಸಂಸದ ಪಪ್ಪು ಯಾದವ್ ಅವರಿಗೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ ಬಂದಿದೆ. ಅಪರಿಚಿತ ಕರೆ ಮಾಡಿದ ವ್ಯಕ್ತಿ ತಾನು ಕುಖ್ಯಾತ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿದ್ದಾನೆ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಸಂಬಂಧಿಸಿದ ಕೇಸ್ಗಳಿಂದ ದೂರವಿರುವಂತೆ ಪಪ್ಪು ಯಾದವ್‌ಗೆ ಬೆದರಿಕೆ ಹಾಕಿದ್ದಾನೆ.
ಕರೆ ಮಾಡಿದವನು ಪಪ್ಪು ಯಾದವ್ ಅವರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಸಬರಮತಿ ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿರುದ್ಧ ಹೇಳಿಕೆಗಳನ್ನು ನೀಡದಂತೆ ಸೂಚಿಸಿದ್ದಾನೆ. ಯುಎಇ ಸಂಖ್ಯೆಯಿಂದ ಕರೆ ಬಂದಿದ್ದು, ಅದರ ರೆಕಾರ್ಡಿಂಗ್ ಅನ್ನು ಬಿಹಾರ ಡಿಜಿಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕಳುಹಿಸಲಾಗಿದೆ.