ವಕೀಲೆ ಜೀವಾ ಆತ್ಮಹತ್ಯೆ ಕೇಸ್: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಬಂಧಿಸಲಾಗಿದೆ.

ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಎದುರಿಸಿದ್ದ ವಕೀಲೆ ಎಸ್‌.ಜೀವಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ.

ವಕೀಲೆ ಜೀವಾ, ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ.

ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.

ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 13 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!