Sunday, October 1, 2023

Latest Posts

ಅಂಕೋಲಾದಲ್ಲಿ ನೂತನ ನಾಡ ಕಚೇರಿ ಕಟ್ಟಡವನ್ನು ಉದ್ಘಾಟಿಸಿದ ಶಾಸಕಿ ರೂಪಾಲಿ ನಾಯ್ಕ

ಹೊಸದಿಗಂತ ವರದಿ,ಅಂಕೋಲಾ:

ತಾಲೂಕಿನ ಬಾಸಗೋಡ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನಾಡ ಕಚೇರಿ ಕಟ್ಟಡವನ್ನು ಶಾಸಕಿ ರೂಪಾಲಿ ನಾಯ್ಕ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗಗಳ ಜನರಿಗೆ ಅನುಕೂಲ ಕಲ್ಪಿಸಲು ನಾಡ ಕಛೇರಿಗಳನ್ನು ತೆರೆಯಲಾಗುತ್ತಿದ್ದು ಕಚೇರಿ ಮೂಲಕ ನಡೆಯುವ ಜನ ಸಾಮಾನ್ಯರ ಕೆಲಸಗಳಿಗೆ ಯಾವುದೇ ರೀತಿಯ ವಿಳಂಬ ಆಗಬಾರದು ಎಂದರು.
ನಾಡ ಕಚೇರಿಗೆ ಆಗಮಿಸುವ ಜನರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕೆಲಸಗಳನ್ನು ಮಾಡಿಕೊಡಬೇಕು, ಜನರಿಗೆ ಕುಳಿತುಕೊಳ್ಳಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ ಯಾವುದೇ ದೂರುಗಳು ಬರದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದ ಶಾಸಕಿ ರೂಪಾಲಿ ನಾಯ್ಕ ಅವರು ಕಟ್ಟಡವನ್ನು ಉತ್ತಮವಾಗಿ ನಿರ್ಮಾಣ ಮಾಡಲಾಗಿದೆ ಸುತ್ತ ಮುತ್ತಲಿನ ಗ್ರಾಮಗಳ ಜನರು ನಾಡ ಕಚೇರಿಯ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.
ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷೆ ರೇಖಾ ಗಾಂವಕರ್, ಬೊಬ್ರವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀಮಾ ಸುಧೀರ ನಾಯ್ಕ, ಶೆಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ನಾಯಕ, ತಹಶೀಲ್ಧಾರ ಉದಯ ಕುಂಬಾರ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!