ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 179 ರನ್ ದಾಖಲಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 180 ರನ್ ಟಾರ್ಗೆಟ್ ನೀಡಿದೆ.
ಪಂಜಾಬ್ ಪರ ನಾಯಕ ಕೆ.ಎಲ್. ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಅವರು 57 ಬಾಲ್ಗೆ 91 ರನ್ (7 ಬೌಂಡರಿ, 5 ಸಿಕ್ಸರ್) ಕಲೆಹಾಕಿದ್ದಾರೆ.
ಮೊದಲ ವಿಕೆಟ್ ಬಳಿಕ ಕ್ರಿಸ್ ಗೈಲ್ 46 (24) ಅಬ್ಬರದ ಬ್ಯಾಟಿಂಗ್ ನಡೆಸಿದರು. ಅಂತಿಮವಾಗಿ ಹರ್ಪ್ರೀತ್ ಬ್ರರ್ 25 (17) ರನ್ ಗಳಿಸಿದರು.
ಉಳಿದಂತೆ ಪಂಜಾಬ್ ಬ್ಯಾಟಿಂಗ್ ಲೈನ್ಅಪ್ ಕುಸಿತ ಕಂಡಿದೆ. ಪೂರನ್ ಹಾಗೂ ಶಾರುಖ್ ಖಾನ್ ಸೊನ್ನೆಗೆ ಔಟ್ ಆಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜಾಮಿಸನ್ 2 ವಿಕೆಟ್ ಕಬಳಿಸಿದ್ದಾರೆ. ಡೇನಿಯಲ್ ಸ್ಯಾಮ್ಸ್ ಮತ್ತು ಶಹಬಾಜ್ ಅಹಮದ್ ರನ್ ನಿಯಂತ್ರಿಸಿದ್ದಾರೆ.