Sunday, December 3, 2023

Latest Posts

ಕಲಬುರಗಿ ಜಿಲ್ಲಾ ಬಿಜೆಪಿ ಘಟಕದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್‌ಗೆ ಆತ್ಮೀಯ ಸ್ವಾಗತ

ಹೊಸದಿಗಂತ ವರದಿ ಕಲಬುರಗಿ:

ಬರ ವೀಕ್ಷಣೆಗೆ ಕಲಬುರಗಿ ನಗರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಜಿಲ್ಲಾ ಬಿಜೆಪಿ ಘಟಕದ ನಾಯಕರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡರು.

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶ್ರೀನಿವಾಸ ಸರಡಗಿ ಹಾಗೂ ಆಳಂದ ಮತಕ್ಷೇತ್ರದ ಕಡಗಂಚಿಯ ಹೊಲಗಳಿಗೆ ತೆರಳಿ ಬರ ಅಧ್ಯಯನ ಮಾಡಲಿದ್ದು, ತದನಂತರ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಶಾಸಕ ಬಸವರಾಜ ಮತ್ತಿಮಡು, ನಗರಾಧ್ಯಕ್ಷ ಸಿದ್ದಾಜಿ ಪಾಟೀಲ್, ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ,ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೇಲ್ಕೂರ್, ಮುಖಂಡ ಚಂದು ಪಾಟೀಲ್, ಮಹಾಪೌರ ವಿಶಾಲ ದರ್ಗಿ,ಉಪ ಮಹಾಪೌರ ಶಿವಾನಂದ ಪಿಸ್ತಿ,ನಗರ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!